ಕರ್ನಾಟಕ ಪಂಚಾಯತ್ ಅದಿನಿಯಮ 1993ರ ಪ್ರಕರಣ ೪ರ ಅನ್ವಯ ಸರ್ಕಾರದ ಸಾಮಾನ್ಯ ಅಥವಾ ವಿಶೇಷ ಆದೇಶಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳು 5,000 ಕ್ಕಿಂತ ಕಡಿಮೆ ಇಲ್ಲದ ಹಾಗೂ 7,000 ಕ್ಕಿಂತ ಹೆಚ್ಚಿಲ್ಲದ ಜನಸಂಖ್ಯೆಯನ್ನು ಹೊಂದಿರುವ ಒಂದು ಗ್ರಾಮವನ್ನು ಅಥವಾ ಗ್ರಾಮಗಳ ಗುಂಪನ್ನು ಒಳಗೊಂಡಿರುವ ಯಾವುದೇ ಪ್ರದೇಶವನ್ನು ಗ್ರಾಮ ಪಂಚಾಯಿತಿ ಎಂದು ಘೋಷಿಸಬಹುದು. ಆದರೆ ಮಲೆನಾಡು ಪ್ರದೇಶಗಳಾದ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 25೦೦ ಕ್ಕಿಂತ ಕಡಿಮೆಯಿಲ್ಲದ ಜನಸಂಖ್ಯೆಯುಳ್ಳ ಪ್ರದೇಶವನ್ನು ಗ್ರಾಮ ಪಂಚಾಯತ್ ಎಂದು ಘೋಷಿಸಬಹುದು.
ಗ್ರಾಮ ಪಂಚಾಯಿತಿಯ ಕಾರ್ಯಗಳು: (Functions of Grama Panchayat)
ಗ್ರಾಮ ಪಂಚಾಯಿತಿ ಕಾರ್ಯಗಳು ಈ ಕೆಳಗಿನಂತಿವೆ
1) ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸುವುದು, ಪ್ರಕೃತಿ ವಿಕೋಪಗಳಿಗೆ ಪರಿಹಾರ ಒದಗಿಸುವುದು, ಹಾಗೂ ಗ್ರಾಮಗಳ ಅಂಕಿ ಅಂಶಗಳನ್ನು ಶೇಖರಿಸುವುದು.
2) ಕೃಷಿ ಹಾಗೂ ತೋಟಗಾರಿಕೆ ಫಾರಂಗಳನ್ನು ತೆರೆಯುವುದು ಹಾಗೂ ಅವುಗಳ ನಿರ್ವಹಣೆ ಮಾಡುವುದು ದಾಸ್ತಾನು ಮಳೆಗೆಗಳ ಸ್ಥಾಪನೆ ಮತ್ತು ನಿರ್ವಹಣೆ ಹಾಗೂ ವಸ್ತುಪ್ರದರ್ಶನಗಳನ್ನು ಏರ್ಪಡಿಸುವುದು.
3) ಜಲಾನಯನ ಅಭಿವೃದ್ಧಿ, ಅಂತರ್ಜಲ ಮೂಲಗಳ ಅಭಿವೃದ್ಧಿ ಹಾಗೂ ಸಣ್ಣ ನೀರಾವರಿ ಕಾಮಗಾರಿ ನಿರ್ಮಾಣ.
4) ಹಂದಿ ಸಾಗಾಣಿಕೆ, ಕೋಳಿ, ಹೈನು ಹಾಗೂ ಪಶುಸಾಗಾಣಿಕೆ ಪ್ರೋತ್ಸಾಹ, ಪಶು ಆಸ್ಪತ್ರೆಗಳ ನಿರ್ಮಾಣ ಮತ್ತು ಪಶುಗಳಿಗೆ ತಗಲುವ ಅಂಟುರೋಗಗಳ ನಿವಾರಣೆ.
5) ಮೀನು ಸಾಗಾಣಿಕೆ ಹಾಗೂ ಮೀನು ಸಾಗಾಣಿಕೆ ಅಭಿವೃದ್ಧಿ ಮತ್ತು ಮೀನುಗಾರರ ಕಲ್ಯಾಣ ಕಾರ್ಯಗಳು.
6) ಗ್ರಾಮೀಣ ಗುಡಿ ಕೈಗಾರಿಕೆಗೆ, ಪ್ರೋತ್ಸಾಹ ನೀಡುವುದು ಮತ್ತು ಅವುಗಳಿಗೆ ಮಾರುಕಟ್ಟೆಗಳನ್ನು ಒದಗಿಸುವುದು.
7) ಸಣ್ಣ ಕೈಗಾರಿಕೆಗಳ ಪ್ರೋತ್ಸಾಹ.
8) ಗ್ರಾಮೀಣ ಬಡವರಿಗೆ ಮನೆಗಳನ್ನು ಕಟ್ಟಿಸಿ ಕೊಡುವುದು.
9) ಶುದ್ಧವಾದ ಕುಡಿಯುವ ನೀರಿನ ಸರಬರಾಜು ಮಾಡುವುದು ಹಾಗೂ ಗ್ರಾಮ ನೈರ್ಮಲ್ಯವನ್ನು ಕಾಪಾಡುವುದು.
1೦) ಸಾಮಾಜಿಕ ಅರಣ್ಯ ನಿರ್ಮಾಣ ಮತ್ತು ಮೇವು ಅಭಿವೃದ್ಧಿಗೆ ಒತ್ತು ನೀಡುವುದು. ಬಂಜರು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸುವುದು.
11) ಗ್ರಾಮೀಣ ರಸ್ತೆಗಳು, ಕಾಲುದಾರಿ, ಅಣೆಕಟ್ಟುಗಳ ನಿರ್ಮಾಣ ಮತ್ತು ನಿರ್ವಹಣೆ.
12) ಅಸಂಪ್ರದಾಯಕ ಇಂಧನ ಮೂಲಗಳ ಅಭಿವೃದ್ಧಿ ಹಾಗೂ ಪ್ರೋತ್ಸಾಹ.
13) ಗ್ರಾಮೀಣ ಭಾಗದ ಜನರ ಬಡತನವನ್ನು ಹೋಗಲಾಡಿಸಲು ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವುದು.
14) ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸ್ಥಾಪನೆ ಹಾಗೂ ಅವುಗಳ ನಿರ್ವಹಣೆ. ಆಶ್ರಮ ಶಾಲೆಗಳು ಹಾಗೂ ಅನಾಥಾಶ್ರಮಗಳ ಸ್ಥಾಪನೆ.
15) ಗ್ರಾಮೀಣ ಕರಕುಶಲ ಮತ್ತು ವೃತ್ತಿ ತರಬೇತಿ ಕೇಂದ್ರಗಳ ಸ್ಥಾಪನೆ ಹಾಗೂ ನಿರ್ವಹಣೆ.
16) ಅನೌಪಚಾರಿಕ ಶಿಕ್ಷಣವನ್ನು ಆರಂಭಿಸುವುದು ಮತ್ತು ವಯಸ್ಕ ಸಾಕ್ಷರತಾ ಕಾರ್ಯಗಳನ್ನು ಹಮ್ಮಿಕೊಳ್ಳುವುದು.
17) ಗ್ರಾಮೀಣ ಭಾಗದಲ್ಲಿ ಜಾತ್ರೆ ಹಾಗೂ ಮಾರುಕಟ್ಟೆಗಳನ್ನು ನಿಯಂತ್ರಿಸುವುದು.
18) ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳು, ಚಿಕಿತ್ಸಾಲಯಗಳು ನಿರ್ಮಾಣ ಹಾಗೂ ನಿರ್ವಹಣೆ. ಗರ್ಭಿಣಿಯರ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮಗಳು ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ. ರೋಗನಿರೋಧಕ ಹಾಗೂ ಲಸಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
19) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯಗಳನ್ನು ಪ್ರೋತ್ಸಾಹಿಸುವುದು.
20) ಅಂಗವಿಕಲರು, ನಿರಾಶ್ರಿತರು ಹಾಗೂ ಮಾನಸಿಕ ಅಸ್ವಸ್ಥರ ಕಲ್ಯಾಣ ಕಾರ್ಯಕ್ರಮಗಳನ್ನು ಆರಂಭಿಸುವುದು.
21) ದುರ್ಬಲ ವರ್ಗಗಳು ಹಾಗೂ ಪರಿಶಿಷ್ಟಜಾತಿ/ಜನಾಂಗಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಿತಾಸಕ್ತಿಗಳನ್ನು ಕಾಪಾಡುವುದು.
22) ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ನೋಡಿಕೊಳ್ಳುವುದು.
23) ಗ್ರಾಮೀಣ ವಿದ್ಯುದ್ಧೀಕರಣ
24) ಸಹಕಾರ ಚಟುವಟಿಕೆಗಳಿಗೆ ಪ್ರೋತ್ಸಾಹ.
25) ಸಂತೆಗಳನ್ನು ಏರ್ಪಡಿಸುವುದು ಮತ್ತು ನಿಯಂತ್ರಿಸುವುದು.
26) ಗ್ರಂಥಾಲಯಗಳ ಹಾಗೂ ವಾಚನಾಲಯ ಕೊಠಡಿಗಳ ನಿರ್ಮಾಣ ಹಾಗೂ ನಿರ್ವಹಣೆ.
27) ಸಾರ್ವಜನಿಕ ಉದ್ಯಾನವನಗಳ ಹಾಗೂ ಕ್ರೀಡಾಂಗಣಗಳ ಸಂರಕ್ಷಣೆ.
28) ರುದ್ರ ಭೂಮಿ ಸಂರಕ್ಷಣೆ.
ಉಪಸಂಹಾರ