ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ಕೈಗಾರಿಕೆಗಳಿಂದ ವಾಯು ಮಾಲಿನ್ಯವಾಗುತ್ತಿದೆ. ಇದು ಮಾನವನ ಆರೋಗ್ಯ ಹಾಗೂ ಪರಿಸರದ ಮೇಲೆ ತೀವ್ರ ಪರಿಣಾಮವನ್ನುಂಟುಮಾಡುತ್ತದೆ. ಭಾರತವು ಒಕ್ಕೂಟ ರಾಷ್ಟ್ರಗಳ (UN) ಮಾನವ ಮತ್ತು ಪರಿಸರ ಸಮಾವೇಶ ಸ್ಟಾಕ್ ಹೋಂ 1972 ರಲ್ಲಿ ಭಾಗವಹಿಸಿದ ನಂತರ ಈ ವಾಯುಮಾಲಿನ್ಯ ತಡೆ ಹಾಗೂ ನಿಯಂತ್ರಣ ಕಾಯಿದೆ 1981 ನ್ನು ಜಾರಿಗೆ ತರಲಾಯಿತು. ಇದು 7 ಅಧ್ಯಾಯಗಳು ಹಾಗೂ 54 ಭಾಗಗಳನ್ನು ಹೊಂದಿದೆ.
ಕೇಂದ್ರ ಮಂಡಳಿಯ ಕಾರ್ಯಗಳು: ಕೇಂದ್ರ ಮಂಡಳಿಯ ಕಾರ್ಯಗಳು ಈ ಕೆಳಗಿನಂತಿವೆ.
- ವಾಯುವಿನ ಗುಣಮಟ್ಟ ಕಾಯ್ದುಕೊಳ್ಳಲು, ಮಾಲಿನ್ಯವನ್ನು ತಡೆಗಟ್ಟಲು, ನಿಯಂತ್ರಿಸಲು, ಕಡಿಮೆ ಮಾಡಲು ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವುದು.
- ವಾಯು ಮಾಲಿನ್ಯವನ್ನು ತಡೆಗಟ್ಟಲು ದೇಶ ವ್ಯಾಪಿ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವುದು.
- ವಾಯುವಿನ ಗುಣಮಟ್ಟವನ್ನು ಸುಧಾರಿಸುವ ಹಾಗೂ ಅದರ ಸಮಸ್ಯೆಗಳ ಬಗ್ಗೆ ಕಾಲಕಾಲಕ್ಕೆ ಸಲಹೆಯನ್ನು ನೀಡುವುದು.
- ವಾಯುಮಾಲಿನ್ಯವನ್ನು ತಡೆಗಟ್ಟಲು ಬೇಕಾಗುವ ತಾಂತ್ರಿಕ ಸಹಾಯ ಮತ್ತು ಮಾರ್ಗದರ್ಶನಗಳನ್ನು ರಾಜ್ಯ ಮಂಡಳಿ ಹಾಗೂ ಕೈಗಾರಿಕೆಗಳಿಗೆ ಪೂರೈಸುವುದು.
- ವಾಯುಮಾಲಿನ್ಯವನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ತರಬೇತಿಯನ್ನು ನೀಡುವುದು.
- ವಾಯುಮಾಲಿನ್ಯದ ಕುರಿತು ಸಂಶೋಧನೆಗಳನ್ನು ನಡೆಸಲು ಪ್ರಯೋಗಾಲಯಗಳನ್ನು ಸ್ಥಾಪಿಸುವುದು.
- ವಾಯು ಮಾಲಿನ್ಯ ಗುಣಮಟ್ಟವನ್ನು ಕಾಪಾಡುವುದು.
- ವಾಯುಮಾಲಿನ್ಯಕ್ಕೆ ಕಾರಣ, ಪರಿಣಾಮ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಮಗ್ರವಾದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವುದು. ಇದಕ್ಕಾಗಿ ಸಮೂಹ ಮಾಧ್ಯಮಗಳನ್ನು ಬಳಸಿಕೊಳ್ಳುವುದು.
- ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು ಶೇ. 4.5 ಕ್ಕಿಂತ ಹೆಚ್ಚು ಮಾಲಿನ್ಯಕಾರಕಗಳನ್ನು ಬಿಡುಗಡೆ ಮಾಡಿದಂತೆ ಕ್ರಮ ಜರುಗಿಸುವುದು.
- ವಾಹನಗಳಿಗೆ ಶಬ್ಧ ಮಾಡುವ ಉಪಕರಣಗಳನ್ನು ನಿಗದಿಪಡಿಸಿದಂತೆ ಬಳಕೆ ಮಾಡಬೇಕು.
ರಾಜ್ಯ ಮಂಡಳಿಗಳ ಕಾರ್ಯಗಳು:
- ಮಾಲಿನ್ಯ ನಿಯಂತ್ರಣ ಕುರಿತು ರಾಜ್ಯ ಸರ್ಕಾರಗಳಿಗೆ ಸಲಹೆ ಹಾಗೂ ಶಿಫಾರಸ್ಸುಗಳನ್ನು ನೀಡುವುದು.
- ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವುದು.
- ವಾಯುಮಾಲಿನ್ಯದ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಸೇರಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
- ವಾಯು ಮಾಲಿನ್ಯ ಪ್ರದೇಶಗಳನ್ನು ಪರಿಶೀಲಿಸುವುದು.
- ವಾಯುಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳನ್ನು ಗುರುತಿಸುವುದು ಹಾಗೂ ಅಂತಹ ಕೈಗಾರಿಕೆಗಳಿಗೆ ಎಚ್ಚರಿಕೆಯನ್ನು ನೀಡುವುದು.
- ವಾಯುಮಾಲಿನ್ಯವನ್ನು ಕಡಿಮೆ ಮಾಡುವಂತಹ ಕ್ರಮಗಳನ್ನು ರೂಪಿಸಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಕ್ರಮ ಜರುಗಿಸುವುದು.
ಉಪಸಂಹಾರ
ವಾಯುಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯಿದೆ–1981 ದೇಶದ ಪರಿಸರ ಸಂರಕ್ಷಣೆಗೆ ಮಹತ್ವದ ಕಾನೂನು ಸಾಧನವಾಗಿದೆ. ಕೇಂದ್ರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಈ ಕಾಯಿದೆಯ ಮೂಲಕ ವಾಯು ಗುಣಮಟ್ಟವನ್ನು ಸುಧಾರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕೈಗಾರಿಕೆಗಳು ಮತ್ತು ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸುವುದರಿಂದ ಮಾತ್ರ ಆರೋಗ್ಯಕರ ಪರಿಸರ ಸಾಧ್ಯವಾಗುತ್ತದೆ. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಶುದ್ಧ ವಾಯು ನಮ್ಮ ಮೂಲಭೂತ ಹಕ್ಕಾಗಿದೆ.